ಪಿಯುಸಿ ವಿದ್ಯಾರ್ಥಿಯಿಂದ ಪತ್ನಿಗೆ ಅಶ್ಲೀಲ ಮೆಸೇಜ್; ಯುವಕನನ್ನು ಕರೆಸಿ ಬುದ್ಧಿವಾದ ಹೇಳಿದ ಹಾಸ್ಯ ನಟ ಸಂಜು ಬಸಯ್ಯ

Views: 173
ಕನ್ನಡ ಕರಾವಳಿ ಸುದ್ದಿ: ಪತ್ನಿಗೆ ಇನ್ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನನ್ನು ಹಾಸ್ಯನಟ ಸಂಜು ಬಸಯ್ಯ ಅವರು ಪೊಲೀಸ್ ಠಾಣೆಗೆ ಕರೆಯಿಸಿ ಬುದ್ಧಿ ಹೇಳಿ ಕಳುಹಿಸುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಂಜು ಬಸಯ್ಯ ಅವರ ಪತ್ನಿ ನಟಿ ಪಲ್ಲವಿ ಸಂಜು ಬಸಯ್ಯ ಅವರಿಗೆ ವಿಜಯನಗರ ಮೂಲದ ಮನೋಜ್ ಎಂಬ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವಕ ಇನ್ಸ್ಟಾಗ್ರಾಮ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದ.
ಅಶ್ಲೀಲ ಮೆಸೇಜ್ ಜತೆಗೆ ಅಶ್ಲೀಲ ಫೋಟೊಗಳನ್ನೂ ಕಳುಹಿಸಿದ್ದ. ಇದರಿಂದ ಸಂಯಮ ಕಳೆದುಕೊಳ್ಳದ ಸಂಜು ಬಸಯ್ಯ, ಬೈಲಹೊಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಅಶ್ಲೀಲ ಸಂದೇಶ ಕಳುಹಿಸಿದ ಯುವಕನನ್ನು ಕರೆಯಿಸಿ ಬುದ್ಧಿ ಹೇಳಿ ಕಳುಹಿಸಿದ್ದಾರೆ.
ಯುವಕನ ಭವಿಷ್ಯ ಹಾಳಾಗಬಾರದೆಂದು ಸಂಜು ಬಸಯ್ಯ ಅವರು ಬುದ್ಧಿ ಹೇಳಿ ಕಳುಹಿಸಿದ್ದಾರೆ. ಈ ಬಗ್ಗೆ ಯುವಕ ಮಾತನಾಡಿ, ನಾನು ಬಹಳ ದಿವಸದಿಂದ ಇನ್‌ಸ್ಟಾಗ್ರಾಂ ಬಳಸುತ್ತಿದ್ದೆ. ಪಲ್ಲು ಸಂಜು ಅಫಿಷಿಯಲ್ ಖಾತೆಗೆ ಕೆಟ್ಟ ಕಾಮೆಂಟ್ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ್ದೆ. ಈ ಬಗ್ಗೆ ಸಂಜು ಬಸಯ್ಯ ಅವರು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ನನ್ನನ್ನು ಕರೆಸಿ, ಶಿಕ್ಷೆ ಕೊಟ್ಟಿದ್ದಾರೆ. ನನಗೆ ನನ್ನ ತಪ್ಪಿನ ಅರಿವಾಗಿದೆ. ನಾನು ಮಾಡಿದಂತೆ ಇನ್ಯಾರೂ ಈ ರೀತಿ ಮಾಡಬೇಡಿ. ಎಲ್ಲರಲ್ಲೂ ಕ್ಷಮೆ ಕೇಳುತ್ತೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.