ಆರೋಗ್ಯ

ಜ್ವರವೆಂದು ಚಿಕಿತ್ಸೆಗೆ ಬಂದ13 ವರ್ಷದ ಬಾಲಕಿಗೆ ಗರ್ಭಿಣಿ ಎಂದು ವರದಿ, ವೈದ್ಯಾಧಿಕಾರಿ ವಿರುದ್ಧ ದೂರು 

Views: 234

ಕನ್ನಡ ಕರಾವಳಿ ಸುದ್ದಿ: ತೀವ್ರ ಜ್ವರದ ಹಿನ್ನೆಲೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ವೈದ್ಯಾಧಿಕಾರಿ ಗರ್ಭಿಣಿ ಎಂದು ವರದಿ ನೀಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಸುಳ್ಯದಲ್ಲಿ ನಡೆದ ಘಟನೆ ಬಗ್ಗೆ ಆರೋಗ್ಯ ಇಲಾಖೆಗೆ ದೂರು ನೀಡಲಾಗಿದೆ.

ಜ್ವರದಿಂದ ಬಳಲುತ್ತಿದ್ದ 13 ವರ್ಷದ ಬಾಲಕಿಯನ್ನು ಆಕೆಯ ಹೆತ್ತವರು ಚಿಕಿತ್ಸೆಗಾಗಿ ಜು. 1ರಂದು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದರು,. ಅಲ್ಲಿನ ಕರ್ತವ್ಯ ವೈದ್ಯಾಧಿಕಾರಿ ಬಾಲಕಿಯನ್ನು ತಪಾಸಣೆ ಮಾಡಿದ ಅನಂತರ ಹೊರ ರೋಗಿಗಳ ದಾಖಲಾತಿಯಲ್ಲಿ ಯುಪಿಟಿ ಪಾಸಿಟಿವ್ (ಗರ್ಭಿಣಿ) ಎಂದು ಬರೆದಿದ್ದು, ಇನ್ನಷ್ಟು ತಪಾಸಣೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದರು. ಈ ವರದಿಯಿಂದ ಗಾಬರಿಗೊಂಡ ಹೆತ್ತವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಮಗಳು ಗರ್ಭಿಣಿಯಾಗಿಲ್ಲ ಎಂಬ ವರದಿ ಲಭಿಸಿದೆ. ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗಲೂ ಗರ್ಭಧಾರಣೆಯ ಕುರಿತು ಯಾವುದೇ ದೃಢೀಕರಣ ನೀಡಿರಲಿಲ್ಲ.

ಶಾಲೆಯ ಸಹಪಾಠಿಗಳು, ಶಿಕ್ಷಕರು ಮತ್ತು ಸ್ಥಳೀಯರು ಈ ಕುರಿತು ಮಾತು ಮಾತಿನಲ್ಲಿ ಬಾಲಕಿಯನ್ನು ಮಾನಹಾನಿ ಮಾಡುತ್ತಿದ್ದಾರೆ. ಅಪ್ರಾಪ್ತ ಮಗಳಿಗೆ ತಪ್ಪು ವೈದ್ಯಕೀಯ ಮಾಹಿತಿ ನೀಡುವುದು ಹಾಗೂ ಅವಳ ಖಾಸಗಿ ಮಾಹಿತಿಯನ್ನು ಅನಧಿಕೃತವಾಗಿ ಬಹಿರಂಗಪಡಿಸುವುದು ಪೋಕ್ರೋ ಕಾಯಿದೆ ಹಾಗೂ ಐ.ಪಿ.ಸಿ. ಸೆಕ್ಷನ್ ಗಳ ಅಡಿಯಲ್ಲಿ ಗಂಭೀರ ಅಪರಾಧವಾಗಿರುತ್ತದೆ. ವೈದ್ಯಾಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಾಲಕಿ ಗರ್ಭಿಣಿ ಎಂಬ ವಿಚಾರವನ್ನು ವೈದ್ಯಾಧಿಕಾರಿಯು ಎಲ್ಲರಿಗೂ ಹೇಳಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಸುಳ್ಳು ಮಾಹಿತಿ ಸಾರ್ವಜನಿಕವಾಗಿ ಹರಡಿದ್ದರಿಂದ ನೋವು ಆಗಿದೆ ಮಾತ್ರವಲ್ಲದೇ ಮಗಳು ಶಾಲೆಗೆ ಹೋಗಲು ನಿರಾಕರಿಸುತ್ತಿದ್ದಾಳೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಬಾಲಕಿಯ ಹೆತ್ತವರು ದಾಖಲೆಯೊಂದಿಗೆ ದೂರು ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಎಚ್.ಆರ್.ತಿಮ್ಮಯ್ಯ ಅವರು ತನಿಖೆಗಾಗಿ ತಂಡವನ್ನು ರಚಿಸಿ ಕಳುಹಿಸಿದ್ದಾರೆ. ಈ ತಂಡ ಜು. 10ರಂದು ಆಗಮಿಸಿ ಮಾಹಿತಿ ಸಂಗ್ರಹಿಸಿದೆ. ಡಿಎಚ್‌ ಒ ಡಾ| ಎಚ್.ಆರ್. ಪ್ರಕರಣದ ಬಗ್ಗೆ ಸಂತ್ರಸ್ತರು ದೂರು ನೀಡಿದ್ದಾರೆ. ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ತನಿಖೆ ಅನಂತರ ತಪ್ಪು ಕಂಡುಬಂದಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಚ್‌ ಒ ಡಾ। ತಿಮ್ಮಯ್ಯ ತಿಳಿಸಿದ್ದಾರೆ.

 

Related Articles

Back to top button