ಕರಾವಳಿ

ಮಂಗಳೂರು: ಸುರತ್ಕಲ್ MRPL ವಿಷಾನಿಲ ಸೋರಿಕೆಯಾಗಿ ಘೋರ ದುರಂತ: ಇಬ್ಬರು ಸಾವು 

Views: 1024

ಕನ್ನಡ ಕರಾವಳಿ ಸುದ್ದಿ : ಎಂಆರ್ ಪಿಎಲ್ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ದೀಪಚಂದ್ರ ಭಾರ್ತಿಯಾ, ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ

ವಿಷಾನಿಲ ಸೋರಿಕೆಯಾಗಿ ತೀವ್ರ ಅಸ್ವಸ್ಥಗೊಂಡ ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಿನಾಯಕ ಮೈಗೇರಿ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

Related Articles

Back to top button
error: Content is protected !!