ಜನಮನ

ಮಣಿಪುರ ದುಷ್ಕರ್ಮಿಗಳಿಂದ ಗುಂಡಿನ ದಾಳಿ : ಸೇನಾ ಸಿಬ್ಬಂದಿಗೆ ಗಾಯ

Views: 0

ಮಣಿಪುರದ ಇಂಪಾಲ್ ನ ಪಕ್ಷಿಮ ಕಾಂಟೋ ಸಬಲ್ ಪ್ರದೇಶದಲ್ಲಿ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

ಗಾಯಗೊಂಡ ಸಿಬ್ಬಂದಿಯನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ .ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಬುಡಕಟ್ಟು ಸಮುದಾಯದ ನಡುವೆ ಹಿಂಸಾಚಾರ ಆರಂಭವಾಗಿ 45 ದಿನ ಉರುಳಿದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ

ಹಿಂಸಾಚಾರದಲ್ಲಿ ಇಲ್ಲಿಯವರೆಗೆ 115 ಜನರು ಪ್ರಾಣ ತೆತ್ತಿದ್ದಾರೆ.

60,000 ಜನರು ನೆಲೆ ಕಳೆದುಕೊಂಡಿದ್ದಾರೆ. ಶಾಂತಿ ಪುನರ್ ಸ್ಥಾಪನೆಗೆ ಭಾರತೀಯ ಸೇನೆ ಸೇರಿದಂತೆ 40,000ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಮೊಕ್ಕಾಂ ಹೂಡಿದ್ದು.ಪರಿಸ್ಥಿತಿ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಕೇಂದ್ರ ಮತ್ತು ಮಣಿಪುರದ ಬಿಜೆಪಿ ಸರ್ಕಾರವು ಯಥಾಸ್ಥಿತಿ ಕಾಪಾಡಿಕೊಳ್ಳಲು ಅಗತ್ಯ ಎಲ್ಲಾ ಕ್ರಮಗಳು ಕೈಗೊಂಡಿದ್ದಾರೆ. ಈ ಮಧ್ಯೆ ಸಮುದಾಯದ ಬೇಡಿಕೆ ಈಡೇರಿಸುವುದಾಗಿ ಹೇಳಿದರೂ ಶಾಂತಿ ಸ್ಥಾಪನೆಯ ಮರೀಚಿಕೆಯಾಗಿದೆ.

Related Articles

Back to top button
error: Content is protected !!