ಇತರೆ

ಆಟೋ ರಿಕ್ಷಾದಲ್ಲಿ ಅಮಾಸೆಬೈಲು ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Views: 1731

ಕನ್ನಡ ಕರಾವಳಿ ಸುದ್ದಿ: ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟೋ ರಿಕ್ಷಾದಲ್ಲಿ ಹೋಗುತ್ತಿರುವ ವಿದ್ಯಾರ್ಥಿಗಳಿಗೆ ಆಟೋ ಚಾಲಕ ಹಾಗೂ ಸ್ಥಳೀಯ ಯುವಕನೊಬ್ಬ ಸೇರಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕ ಶರತ್ ಶೆಟ್ಟಿ ಎಂದಿನಂತೆ ತನ್ನ ರಿಕ್ಷಾದಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಾಗ ಸ್ನೇಹಿತ ಮಚ್ಚಟ್ಟು ಗ್ರಾಮದ ಪ್ರಶಾಂತ್ ನಾಯ್ಕನನ್ನು ಜತೆಗೆ ಕರೆದುಕೊಂಡು ಬಂದಿದ್ದನು. ಪ್ರಯಾಣಿಸುತ್ತಿರುವ ವೇಳೆಯಲ್ಲಿ ಇಬ್ಬರೂ ಜತೆಗೂಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬಳು ಶಾಲೆಯ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕ ಶಶಿಧರ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿರುವ ಕಾರಣ ಪೋಕ್ಸೋ ಜತೆಗೆ ದಲಿತ ದೌರ್ಜನ್ಯ ಪ್ರಕರಣವನ್ನೂ ದಾಖಲಿಸಿಕೊಳ್ಳಲಾಗಿದೆ.

Related Articles

Back to top button
error: Content is protected !!