ಇತರೆ

ಗಂಗೊಳ್ಳಿ ಠಾಣೆಯ ಸಿಬ್ಬಂದಿ ರಾಮಚಂದ್ರ ಶೇರುಗಾರ್ ಹೃದಯಾಘಾತದಿಂದ ನಿಧನ 

Views: 541

ಕನ್ನಡ ಕರಾವಳಿ ಸುದ್ದಿ: ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ರಾಮಚಂದ್ರ ಶೇರುಗಾರ್ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

ಗುರುವಾರ ಮಧ್ಯಾಹ್ನ 11ಗಂಟೆಯ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ರಾಮಚಂದ್ರ ಶೇರುಗಾರ್ ಕಳೆದ 25 ವರ್ಷಗಳಿಂದ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು ಇನ್ನು ಒಂದು ವಾರದಲ್ಲಿ ಪ್ರಮೋಷನ್ ಆಗಿ ಎಎಸ್ ಐ ಆಗುವ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ರಾಮಚಂದ್ರ ಶೇರುಗಾರ್ ಅಕಾಲಿಕ ಸಾವಿನಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪವನ ನಾಯಕ್, ಬಸವರಾಜ್ ಕನ್ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

 

Related Articles

Back to top button