ಯುವಜನ

ಬ್ರಹ್ಮಾವರ:ಚೇರ್ಕಾಡಿಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ 

Views: 213

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಚೇರ್ಕಾಡಿಯಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ರಶ್ಮಿತಾ (20) ಎಂದು ತಿಳಿಯಲಾಗಿದೆ.

ಚೇರ್ಕಾಡಿ ಗ್ರಾಮದ ರಾಮ ಎಂಬುವವರ ಮಗಳು ರಶ್ಮಿತಾ B.Sc ನರ್ಸಿಂಗ್‌ ವಿಧ್ಯಾಭ್ಯಾಸ ಕಲಿಯುತ್ತಿದ್ದವಳು ಪರೀಕ್ಷೆಯಲ್ಲಿ ಫೇಲ್ ಆಗಿ ಸುಮಾರು 6 ತಿಂಗಳಿಂದ ಕಾಲೇಜಿಗೆ ಹೋಗದೇ ಮನೆಯಲ್ಲಿಯೇ ಇದ್ದು, ಕಳೆದ ಎರಡೂವರೆ ತಿಂಗಳಿಂದ ಮಾನಸಿಕ ಆಸ್ಪತ್ರೆಯಲ್ಲಿ ಅವಳ ಮಾನಸಿಕ ಖಾಯಿಲೆಗೆ ಚಿಕಿತ್ಸೆ ನಡೆಯುತ್ತಿದ್ದು, ಇದೇ ಕಾರಣದಿಂದ ರಶ್ಮಿತಾ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು  ಮಧ್ಯಾಹ್ನ 2:00 ಗಂಟೆಯಿಂದ ಮಧ್ಯಾಹ್ನ 2:45 ಗಂಟೆಯ ಮಧ್ಯಾವಧಿಯಲ್ಲಿ ಮನೆಯ ಕೋಣೆಯ ಫ್ಯಾನಿಗೆ ಶಾಲನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Related Articles

Back to top button