ಆರೋಗ್ಯ

ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಆದಷ್ಟು ಬೇಗನೆ ಮಾಡಸಿ: ಇಲ್ಲದಿದ್ದರೆ ಕಾರ್ಡ್ ರದ್ದು!! 

Views: 356

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಸಚಿವ ಕೆ.ಹೆಚ್‌. ಮುನಿಯಪ್ಪ ಸೂಚನೆ ನೀಡಿದ್ದಾರೆ.

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಗಿದೆ. ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಗಳು ವಿಳಂಬವಿಲ್ಲದೆ ಪೂರ್ಣಗೊಳ್ಳುವಂತೆ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಒತ್ತಾಯಿಸಿದರು.

ಅನಗತ್ಯವಾಗಿ ಕಾರ್ಡುಗಳು ವಿತರಣೆ ಆದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಬೇಕಿರುವ ವಾಹನ ಸೌಲಭ್ಯ ಹಾಗೂ ಕಾನೂನು ಮಾಪನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

Related Articles

Back to top button