ಕೋಟ ಸಮೀಪ ಗರಿಕೆಮಠದಲ್ಲಿ ಅಂದರ್ ಬಾಹರ್ ಜುಗಾರಿ ಆಟ :6 ಮಂದಿ ಪೊಲೀಸ್ ವಶಕ್ಕೆ

Views: 101
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ಕುಂದಾಪುರದ ಕೋಟ ಸಮೀಪ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿರುವಾಗ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ. ಕೆಲವರು ಅಲ್ಲಿಂದಲೇ ಪರಾರಿಯಾಗಿದ್ದಾರೆ.
ಜುಗಾರಿ ಆಟಕ್ಕೆ ಬಳಸಿದ್ದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡ ತನಿಖೆ ನಡೆಸುತ್ತಿದ್ದಾರೆ.
ದಿನಾಂಕ 18/07/2025 ರಂದು ಸುಧಾ ಪ್ರಭು, ಕೋಟ ಪೊಲೀಸ್ ಉಪನಿರೀಕ್ಷಕರಾದ ಸುಧಾ ಪ್ರಭು ಅವರು ಠಾಣೆಯಲ್ಲಿರುವಾಗ ಬ್ರಹ್ಮಾವರ ತಾಲೂಕು ಅಚ್ಲಾಡಿ ಗ್ರಾಮದ ಗರಿಕೆಮಠ ಎಂಬಲ್ಲಿಯ ಹಾಡಿಯಲ್ಲಿ ಅಂದರ್ ಬಾಹರ್ ಎಂಬ ಇಸ್ಪೀಟು ಆಟ ಆಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು ಆಟ ಆಡುತ್ತಿದ್ದವರು ಓಡಿ ಹೋಗಿದ್ದು, ಅದರಲ್ಲಿ ಇಸ್ಪೀಟು ಆಡುತ್ತಿದ್ದ ರಾಜು, ರಮಾನಂದ, ರಾಜು,ಸಂತೋಷ, ರಾಜೀವ, ಕೃಷ್ಣ ಇವರನ್ನು ಹಾಗೂ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ಒಟ್ಟು ನಗದು 15,450/, ಕಾರು-3, ಸ್ಕೂಟರ್ -2, ರೌಂಡ್ ಟೇಬಲ್ -1, ಪ್ಲಾಸ್ಟೀಕ್ ಚೇರಗಳು-6, ಇಸ್ಪೀಟ್ ಎಲೆಗಳನ್ನು ಸ್ವಾಧಿನಪಡಿಸಿಕೊಂಡಿದ್ದಾಗಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ