ಶಿಕ್ಷಣ
ಇಬ್ಬರು ಉಪನ್ಯಾಸಕರಿಂದ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಬಿಡಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

Views: 170
ಕನ್ನಡ ಕರಾವಳಿ ಸುದ್ದಿ: ಉಪನ್ಯಾಸಕರ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ಈ ದುರ್ಘಟನೆ ಸಂಭವಿಸಿದೆ. ಜ್ಯೋತಿ ಶರ್ಮಾ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಗ್ರೇಟರ್ ನೊಯ್ಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ಮೂರನೇ ವರ್ಷದ ಬಿಡಿಎಸ್ (ಡೆಂಟಲ್) ಕೋರ್ಸ್ ಓದುತ್ತಿದ್ದರು. ಇಬ್ಬರು ಉಪನ್ಯಾಸಕರು ನೀಡುತ್ತಿದ್ದ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಶಿಕ್ಷಕರು ನೀಡುತ್ತಿದ್ದ ನಿರಂತರ ಒತ್ತಡ ಹಾಗೂ ಕಿರುಕುಳವೇ ಸಾವಿಗೆ ಕಾರಣ ಎಂದು ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟಿದ್ದು, ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸಿದ್ದಾರೆ.