ಶಿಕ್ಷಣ

ಯೋಗಾಸನ ಸ್ಪರ್ಧೆ: ವಿದ್ಯಾರಣ್ಯ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Views: 92

ಕನ್ನಡ ಕರಾವಳಿ ಸುದ್ದಿ, ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಸಂಯುಕ್ತ ಆಶ್ರಯದಲ್ಲಿ ಅಗಸ್ಟ್ 1ಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಇವರಲ್ಲಿ ಮೂವರು ವಿದ್ಯಾರ್ಥಿನಿಯರು ಹಾಗೂ ಒಬ್ಬ ಬಾಲಕ ಇದ್ದಾರೆ.

17ರ ವಯೋಮಾನದೊಳಗಿನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ, 14 ವಯೋಮಾನದೊಳಗಿನವರಲ್ಲಿ ಪ್ರಥಮ ಸ್ಥಾನ ಪಡೆದ 8ನೇ ತರಗತಿ ಹಂಸಿ, ಗಹನ ಆರ್. ಕುಲಾಲ್ ಹಾಗೂ 17ರ ವಯೋಮಾನದೊಳಗಿನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದ 9ನೇ ತರಗತಿಯ ವಿನಯ್ ಸಿ.ಎಸ್. ಜಿಲ್ಲಾಮಟ್ಟಕ್ಕೆ ಆಯ್ಕೆಯಾದವರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಸತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.

Related Articles

Back to top button
error: Content is protected !!