ಇತರೆ

ಕುಂದಾಪುರ: ಲೂನಾ- ಬಸ್ ಢಿಕ್ಕಿಯಾಗಿ ಮಹಿಳೆ ಸಾವು

Views: 266

ಕನ್ನಡ ಕರಾವಳಿ ಸುದ್ದಿ: ಖಾಸಗಿ ಬಸ್ ಢಿಕ್ಕಿಯಾಗಿ ಲೂನಾದಲ್ಲಿ ಸಂಚರಿಸುತ್ತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ -ಸಾವನ್ನಪ್ಪಿದ ಘಟನೆ ಆಗಸ್ಟ್ 3ರಂದು ಬೈಂದೂರು ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಸಂತೆ ಮಾರ್ಕೆಟ್ ಬಳಿ ಭಟ್ರಹಾಡಿ ಎಂಬಲ್ಲಿ ನಡೆದಿದೆ.

ಕುಂದಾಪುರ ತಾಲೂಕಿನ ಕೊರ್ಗಿ ನಿವಾಸಿ ಮಂಜ ಎಂಬುವರ ಪತ್ನಿ ಜಲಜಾ (64) ಸಾವನ್ನಪ್ಪಿದವರು.

ಅವರು ಆನಗಳ್ಳಿಯಿಂದ ಚಾರುಕೊಟ್ಟಿಗೆಗೆ ಕಡೆಗೆ ಪತಿಯೊಂದಿಗೆ ಲೂನಾದಲ್ಲಿ ಹೋಗುತ್ತಿದ್ದಾಗ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ಬಸ್ ಹಿಂದಿನಿಂದ ವೇಗವಾಗಿ ಬಂದು ಢಿಕ್ಕಿಯಾಗಿದೆ. ರಸ್ತೆಗೆ ಬಿದ್ದ ಜಲಜಾ ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರೊಳಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಪತಿ ಸಹ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!