ಇತರೆ

ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪಿಜಿ ಮಾಲೀಕ ಅರೆಸ್ಟ

Views: 183

ಕನ್ನಡ ಕರಾವಳಿ ಸುದ್ದಿ ಸುದ್ದಿ: ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಜಿ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ.

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಪಿಜಿ ಮಾಲೀಕ ಅತ್ಯಾಚಾರವೆಸಗಿದ್ದಾನೆ. ವಿದ್ಯಾರ್ಥಿನಿ ಪಿಜಿಗೆ ಸೇರಿದ್ದ ಕೇವಲ ಹತ್ತು ದಿನಗಳಲ್ಲಿ ಈ ಕೃತ್ಯವೆಸಗಲಾಗಿದೆ. ಅಶ್ರಫ್ ಬಂಧಿತ ಪಿಜಿ ಮಾಲೀಕ.

ಸಂತ್ರಸ್ತ ವಿದ್ಯಾರ್ಥಿನಿ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು. ಶನಿವಾರ ತಡರಾತ್ರಿ ಪಿಜಿ ಮಾಲೀಕ ವಿದ್ಯಾರ್ಥಿನಿಯನ್ನು ಎಳೆದೊಯ್ದು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕೆರೆದೊಯ್ದಿದ್ದ. ಅಲ್ಲಿ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ಸಂಬಂಧ ಅಶ್ರಫ್ ನನ್ನು ಬಂಧಿಸಲಾಗಿದೆ.

Related Articles

Back to top button
error: Content is protected !!