ಆರೋಗ್ಯ

ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಲಾಸ್ಯ ಮಧ್ಯಸ್ಥ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ

Views: 296

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ 3 ಚಿನ್ನದ ಪದಕಗಳನ್ನು ಗಳಿಸಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆ ಆಗಿರುತ್ತಾಳೆ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಶ್ರೀ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

Related Articles

Back to top button