ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್: “ಸ್ಪರ್ಧಾತ್ಮಕ ಪರೀಕ್ಷಾ ಸ್ನೇಹಿ ಪುಸ್ತಕ ಬಿಡುಗಡೆ ಸಮಾರಂಭ ”

Views: 52
ಕನ್ನಡ ಕರಾವಳಿ ಸುದ್ದಿ: ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನೀಟ್, ಸಿಇಟಿ, ಐಐಟಿ ಮತ್ತು ಜೆಇಇ ಪರೀಕ್ಷೆಗಳಿಗೆ ತಯಾರಿ ನಡೆಸಲು ಅನುಕೂಲಕರವಾದ ಪುಸ್ತಕಗಳನ್ನು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್. ಕೆ ಈ ಬಿಡುಗಡೆಗೊಳಿಸಿದರು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ “ಇಂದು ಜಗತ್ತು ಸ್ಪರ್ಧಾತ್ಮಕವಾಗಿ ಮುನ್ನುಗ್ಗುತ್ತಿದ್ದು, ಕೇವಲ ವಿಷಯದ ಜ್ಞಾನದ ಜೊತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾಗುವ ಪ್ರಶ್ನೆಗಳಿಗೆ ಸಮಂಜಸವಾದ ಉತ್ತರಗಳನ್ನು ಬಿಡಿಸಲು ನಾವು ಸಮರ್ಥರಾಗಿರಬೇಕು. ಇಂದು ಬಿಡುಗಡೆ ಮಾಡಲಾಗಿರುವ ಪುಸ್ತಕಗಳು ಅತ್ಯಂತ ಮೌಲಿಕವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು” ಎಂದರು.
ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರರು “ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮುಂದಿನ ಭವಿಷ್ಯತ್ತಿಗೆ ಇಂದೇ ಸಜ್ಜುಗೊಳಿಸುತ್ತಿದ್ದೇವೆ. ನಮ್ಮ ವಿದ್ಯಾರ್ಥಿಗಳು ಪದವಿಪೂರ್ವ ಹಂತಕ್ಕೆ ಬಂದಾಗ, ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಸವಾಲಾಗಿ ಪರಿಣಮಿಸಬಾರದು ಎಂಬ ಕಾರಣಕ್ಕಾಗಿ ಹಿರಿಯ ಪ್ರಾಥಮಿಕ(6ನೇ ತರಗತಿ) ಹಂತದಲ್ಲಿಯೇ ಅಗತ್ಯ ಮಾಹಿತಿಯನ್ನು ನುರಿತ ಉಪನ್ಯಾಸಕರಿಂದ ಉಚಿತವಾಗಿ ನೀಡುತ್ತಿದ್ದೇವೆ ಎಂದರು.
ಜನತಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾ಼ದ ಉದಯ್ ನಾಯ್ಕ್ ಈ ಪುಸ್ತಕದ ಒಳನೋಟ ಮತ್ತು ವ್ಯಾಪ್ತಿಯ ಕುರಿತಾಗಿ ತಿಳಿಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಪೋಷಕರು,ಭೋದಕ/ಭೋದಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.