ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ “ಮಾದಕ ವ್ಯಸನ ಮುಕ್ತ ಅಭಿಯಾನ”
ಮಾದಕ ವ್ಯಸನದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಹಾಳಾಗುವುದಲ್ಲದೆ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತದೆ.ಯುವಜನತೆ ಮಾದಕ ವ್ಯಸನದಿಂದ ಮುಕ್ತರಾಗಿ ಸುಸ್ಥಿರ ಸಮಾಜವನ್ನು ಕಟ್ಟಲು ಬದ್ಧರಾಗಬೇಕು-----ಕುಂದಾಪುರ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀ ಶಾಂತರಾಜ್

Views: 183
ಕನ್ನಡ ಕರಾವಳಿ ಸುದ್ದಿ: ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಅಗಸ್ಟ್ 7ರಂದು ಹಮ್ಮಿಕೊಳ್ಳಲಾಗಿತ್ತು.
ಬಾಂಡ್ಯಾ ಎಜುಕೇಶನ್ ಟ್ರಸ್ಟ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕುಂದಾಪುರ ಪೊಲೀಸ್ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಕುಂದಾಪುರ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀ ಶಾಂತರಾಜ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ನಮ್ಮ ಬದುಕು ಮತ್ತು ಆರೋಗ್ಯವನ್ನು ಹಾಳು ಮಾಡುವ ಈ ಮಾದಕ ವ್ಯಸನವು ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದರು. ಮಾದಕ ವ್ಯಸನದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಹಾಳಾಗುವುದಲ್ಲದೆ ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗುವಂತೆ ಪ್ರೇರೇಪಿಸುತ್ತದೆ. ಮಾನಸಿಕ ಒತ್ತಡ ನಿದ್ರಾಹೀನತೆ, ಹೃದಯಾಘಾತ, ಕ್ಯಾನ್ಸ್ ರ್ ಮುಂತಾದ ಸಮಸ್ಯೆಗಳು ಮಾದಕ ವ್ಯಸನಿಗಳನ್ನು ಕಾಡುವ ಪ್ರಮುಖ ವಿಚಾರಗಳಾಗಿವೆ. ಯುವಜನತೆ ಮಾದಕ ವ್ಯಸನದಿಂದ ಮುಕ್ತರಾಗಿ ಸುಸ್ಥಿರ ಸಮಾಜವನ್ನು ಕಟ್ಟಲು ಬದ್ಧರಾಗಬೇಕೆಂದರು.
ಗುರುಕುಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ರೂಪ ಶಣೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ನಾರಾಯಣ ಪೊಲೀಸ್ ಕಾನ್ಸ್ಟೇಬಲ್ ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಭಾರತ ಅಭಿಯಾನದ ಘೋಷಣಾ ವಿಧಿಯನ್ನು ಭೋದಿಸಲಾಯಿತು. ಡಾ. ಕೃಷ್ಣರಾಜ ಕರಬ ಕಾರ್ಯಕ್ರಮ ನಿರೂಪಿಸಿದರೆ, ಗಣಕಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದರು. ಲೆಕ್ಕಶಾಸ್ತ್ರ ಉಪನ್ಯಾಸಕರಾದ ಶ್ರೀ ಪ್ರಶಾಂತ್ ವಂದಿಸಿದರು.