ಯುವಜನ

ವೆಬ್ ಸೀರಿಸ್ ಪ್ರಭಾವಕ್ಕೆ ಒಳಗಾಗಿ 14 ವರ್ಷದ ಬಾಲಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಶಂಕೆ!

Views: 243

ಕನ್ನಡ ಕರಾವಳಿ ಸುದ್ದಿ: ಮೂರು ದಿನಗಳ ಹಿಂದೆ  14 ವರ್ಷದ ಬಾಲಕ ಗಂಧಾರ್ ಡೆತ್ ನೋಟ್ ಬರೆದು ಏಕಾಏಕಿ ನೇಣಿಗೆ ಶರಣಾಗಿದ್ದು, ಈ ಪ್ರಕರಣದ ತನಿಖೆಗೆ ಇಳಿದಾಗ ಹಲವರು ಶಾಕಿಂಗ್ ವಿಚಾರಗಳು ಹೊರಬಿದ್ದಿದೆ.

ರಾತ್ರಿ ಎಲ್ಲರ ಜೊತೆಗೆ ಊಟ ಮಾಡಿ ತನ್ನ ಪ್ರೀತಿಯ ನಾಯಿ ರಾಕಿ ಜೊತೆಗೆ ಮಲಗಿದ್ದ ಗಂಧಾರ್ ಬೆಳಗಿನ ವೇಳೆ ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದ. ನೇಣಿಗೆ ಶರಣಾಗುವ ಮೊದಲು ಒಂದು ಡೆತ್ ನೋಟ್ ಬರೆದಿದ್ದ. ಅದರಲ್ಲಿ ತಂದೆ ತಾಯಿಯನ್ನು ಉದ್ದೇಶಿಸಿ ನೀವು ನನ್ನನ್ನು ಹದಿನಾಲ್ಕು ವರ್ಷ ಚೆನ್ನಾಗಿಯೇ ಸಾಕಿದ್ದೀರಿ. ನಿಮ್ಮ ಜೊತೆಗೆ ನಾನು ತುಂಬಾ ಖುಷಿಯಾಗಿದ್ದೆ. ಆದರೆ ನಾನು ಹೋಗುವ ಸಮಯ ಬಂದಿದೆ. ನೀವು ಈ ಪತ್ರ ಓದುವ ವೇಳೆಗೆ ನಾನು ಸ್ವರ್ಗದಲ್ಲಿ ಇರುತ್ತೇನೆ ಎಂದು ಡೆತ್ ನೋಟ್ ಬರೆದಿದ್ದ.

ಈ ಡೆತ್ ನೋಟ್ ನೋಡಿದ ಎಲ್ಲರಿಗೂ ಶಾಕ್ ಆಗಿತ್ತು. ಅದರಲ್ಲಿ ಯಾವುದೇ ನೆಗಟಿವ್ ವಿಚಾರಗಳಿಲ್ಲ, ಯಾರ ಮೇಲೂ ಆರೋಪಗಳಿಲ್ಲ. ಯಾವುದೇ ಸಮಸ್ಯೆ ಕೂಡ ಇಲ್ಲ. ಹೀಗಿದ್ದರೂ ಈ ಬಾಲಕ ಇಷ್ಟು ಚಿಕ್ಕವಯಸ್ಸಿಗೆ ಏಕೆ ಇಷ್ಟು ದೊಡ್ಡ ನಿರ್ಧಾರ ತೆಗೆದುಕೊಂಡ ಎಂಬ ಪ್ರಶ್ನೆ ಎದ್ದಿತ್ತು.

ಪ್ರಕರಣ ದಾಖಲಿಸಿ ಪೊಲೀಸರು ತನಿಖೆಗೆ ಇಳಿದಾಗ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಗಂಧಾರ್ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗಿ ವಿಶ್ವಾದ್ಯಂತ ಪ್ರಸಿದ್ಧಿ ಪಡೆದಿದ್ದ ಡೆತ್ ನೋಟ್ ವೆಬ್ ಸೀರಿಸ್ ಎಲ್ಲಾ ಸಂಚಿಕೆಯನ್ನು ತಪ್ಪದೇ ನೋಡುತ್ತಿದ್ದ. ಅಷ್ಟೇ ಅಲ್ಲದೇ ಆ ವೆಬ್ ಸೀರಿಸ್ ಬರುವ ಒಂದು ಪಾತ್ರವನ್ನು ಗಂಧಾರ್ ತನ್ನ ರೂಮಿನಲ್ಲಿ ಬಿಡಿಸಿದ್ದ.

ಈ ವೆಬ್ ಸೀರಿಸ್‌ನಲ್ಲಿ ಒಂದು ಪಾತ್ರವಿದೆ. ಆ ಪಾತ್ರ ಹೇಳಿದಂತೆ ಹೀರೋ ನಡೆದುಕೊಳ್ಳುತ್ತಾನೆ. ಆ ಮಾಯಬುಕ್‌ನಲ್ಲಿ ಯಾರ ಹೆಸರು ಬರೆದು ಅವರು ಹೇಗೆ ಸಾಯಬೇಕು ಎಂದು ಊಹೆ ಮಾಡಿಕೊಂಡರೆ ಆ ವ್ಯಕ್ತಿ ಆ ರೀತಿ ಸಾಯುತ್ತಾನೆ. ಕೆಟ್ಟವರು ಯಾರು ಕೂಡ ಭೂಮಿ ಮೇಲೆ ಬದುಕು ಬಾರದು. ಅವರನ್ನು ಕೊಲೆ ಮಾಡಬೇಕು ಎನ್ನುವುದೇ ಆ ವೆಬ್ ಸೀರಿಸ್‌ನ ಕಥಾವಸ್ತು.

ಈ ಡೆತ್‌ನೋಟ್ ವೆಬ್ ಸೀರಿಸ್ ನೋಡಿ ಅದರ ಅದರ ಪ್ರಭಾವಕ್ಕೆ ಒಳಗಾಗಿ ಗಂಧಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಎಂಬ ಶಂಕೆ ಈಗ ವ್ಯಕ್ತವಾಗಿದೆ. ಅತಿಯಾದ ಅಧ್ಯಾತ್ಮದ ಕಡೆಗೆ ಒಲವು ಇರುವ ಅನುಮಾನವೂ ವ್ಯಕ್ತವಾಗಿದೆ. ಸದ್ಯ ಬಾಲಕ ಗಂಧಾರ್ ಬಳಸುತ್ತಿದ್ದ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!