ಯುವಜನ
ಕುಂದಾಪುರ: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Views: 518
ಕನ್ನಡ ಕರಾವಳಿ ಸುದ್ದಿ: ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 13 ರಂದು ನಡೆದಿದೆ.
ಅರುಣ್ ಮೊಗವೀರ ಅವರ ಪುತ್ರಿ ಅನನ್ಯಾ (17) ಮೃತಪಟ್ಟಿರುವ ವಿದ್ಯಾರ್ಥಿನಿ
ಆಕೆ ಕಳೆದ ಒಂದು ತಿಂಗಳಿನಿಂದ ಕಾಲೇಜಿಗೆ ಹೋಗಲು ಹಿಂಜರಿಯುತ್ತಿದ್ದು, ಹೇರಿಕುದ್ರುವಿನಲ್ಲಿರುವ ಅಜ್ಜಿ ಮನೆಯಲ್ಲಿ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಕೊಲ್ಲೂರಿನಲ್ಲಿರುವ ಮನೆಗೆ ಮರಳಿ ಬಂದಿದ್ದರು. ಮನೆ ದುರಸ್ತಿ ನಿಮಿತ್ತ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗ ಆಕೆ ಈ ಕೃತ್ಯ ಎಸಗಿದ್ದಳು. ಮರಣೋತ್ತರ ಪರೀಕ್ಷೆಗಾಗಿ ಮೃತ ಶರೀರವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಒಯ್ಯಲಾಗಿದೆ.
ಕಲಿಕೆಯಲ್ಲಿ ನಿರಾಸಕ್ತಿಯೇ ಆತ್ಮಹತ್ಯೆಗೆ ಕಾರಣ ಎಂದು ತಂದೆ ಕೊಲ್ಲೂರು ಪೊಲೀಸರಿಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.






