ಶಿಕ್ಷಣ

ಶಟಲ್ ಬ್ಯಾಡ್ಮಿಂಟನ್ ನಲ್ಲಿ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಚಿಮ್ಮಿದ ಜನತಾ ವಿದ್ಯಾರ್ಥಿಗಳು

Views: 25

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಯ್ಯಾಡಿ ಇವರ ಆತಿಥ್ಯದಲ್ಲಿ ನಡೆದ ಖಂಬದಕೋಣೆ ಹೋಬಳಿ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮೂರು ವಿದ್ಯಾರ್ಥಿಗಳು ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

14ರ ವಯೋಮಾನದ ಹುಡುಗರ ವಿಭಾಗದಲ್ಲಿ ಹರಿಜಿತ್(8ನೇ ತರಗತಿ ), ಸನ್ವಿತ್(8ನೇ ತರಗತಿ) ಮತ್ತು ತನಿಷ್( 8ನೇತರಗತಿ) ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ,ಮುಖ್ಯ ಶಿಕ್ಷಕಿ, ಬೋಧಕ/ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button
error: Content is protected !!