ಜನಮನ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಜೋರು

Views: 231

ಕನ್ನಡ ಕರಾವಳಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದಿನಿಂದ ಮತ್ತಷ್ಟು ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಚಂಡಮಾರುತ ಹಾಗೂ ವಾಯುಭಾರ ಕುಸಿತದ ಕಾರಣಕ್ಕೆ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 19ರವರೆಗೆ ಮಳೆ ಆಗಲಿದೆ. ಆ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ಕೋಲಾರ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

Related Articles

Back to top button