ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
"ತ್ಯಾಗದ ನೆಲದಲ್ಲಿ ಅರಳಿದ ಹೂವು - ಸ್ವಾತಂತ್ರ್ಯ"

Views: 84
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ವಿದ್ಯಾರ್ಥಿಗಳು ಭಾರತ ನಕ್ಷೆ ಆಕಾರದಲ್ಲಿ ನಿಂತು ಕೇಸರಿ ,ಬಿಳಿ ,ಹಸಿರು ಬಣ್ಣದ ವಸ್ತ್ರಧಾರಣೆಯ ಮೂಲಕ ದೇಶಭಕ್ತಿ ಸಂದೇಶವನ್ನು ನೀಡಿದರು.ಪಥ ಸಂಚಲನದ ಮೂಲಕ ಮುಖ್ಯ ಅತಿಥಿಗಳನ್ನು ಬರಮಾಡಿಕೊಳ್ಳಲಾಯಿತು.
ಶಾಲಾ ಆವರಣದಲ್ಲಿ ಹಮ್ಮಿಕೊಂಡ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಬಸ್ರೂರು ಗ್ರಾಮದ ನಿವ್ರತ್ತ ಸೈನಿಕರಾದ ದೀಪಕ್ ಕುಮಾರ್ ಅವರು ನೆರವೇರಿಸಿದರು.
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ನೃತ್ಯ ಮತ್ತು ಭಾಷಣಗಳ ಮೂಲಕ ಸ್ವಾತಂತ್ರ್ಯದ ಮಹತ್ವವನ್ನು ಬಿಂಬಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ದೀಪಕ್ ಕುಮಾರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ದೈಹಿಕ ಬಲವನ್ನು ಹೆಚ್ಚಿಸಿಕೊಳ್ಳಿ” ಎಂದರು ಹಾಗೂ ವಿದ್ಯಾರ್ಥಿಗಳಿಗೆ ದೇಶ ಸೇವೆಯಲ್ಲಿ ತೊಡಗಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಳೂರು ದಿನಕರ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಯಾವುದೇ ಜಾತಿ ಮತ ಭೇದಭಾವವಿಲ್ಲದೆ ಎಲ್ಲರೂ ಒಂದಾಗಿ ಸಂಭ್ರಮದಿಂದ ಆಚರಿಸುವ ಹಬ್ಬ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶ್ರೀ ಸಂತೋಷ್ ಶೆಟ್ಟಿ ಅವರು ಶಿಕ್ಷಕರಿಗೆ ಎಷ್ಟು ಗೌರವವಿದೆಯೋ ಅಷ್ಟೇ ಗೌರವ ಸೈನ್ಯಕ್ಕೂ ಇದೆ. ಹಾಗೆಯೇ ನಮಗೆ ಸ್ವಾತಂತ್ರ್ಯ 1947 ಅಗಸ್ಟ್ 15 ರಂದೇ ಏಕೆ ದೊರೆಯಿತು. ಎನ್ನುವುದರ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಅಧಿಕಾರಿಯಾದ ಶ್ರೀಮತಿ ಆಶಾ ಶೆಟ್ಟಿ ಹಾಗೂ ಶಿಕ್ಷಕ/ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ರೇಷ್ಮಾ ಅಡಪ ಸ್ವಾಗತಿಸಿ, ಸಹ ಶಿಕ್ಷಕಿಯರಾದ ಸವಿತಾ ಕಾರ್ಯಕ್ರಮವನ್ನು ನಿರೂಪಿಸಿ, ಶ್ವೇತಾ ವಂದನಾರ್ಪಣೆ ಗೈದರು.