ಶಿಕ್ಷಣ

ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ

"ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿಕೊಂಡು ದೇಶಭಕ್ತಿಯ ಮೌಲ್ಯಗಳನ್ನು ಮೈಗೂಡಿಕೊಳ್ಳಿ"----- ಜಯರಾಮ್.ಡಿ.ಗೌಡ ವೃತ್ತ ನಿರೀಕ್ಷರು, ಕುಂದಾಪುರ.

Views: 543

ಕನ್ನಡ ಕರಾವಳಿ ಸುದ್ದಿ: ಮದರ್ ತೆರೆಸಾ ಶಿಕ್ಷಣ ಸಂಸ್ಥೆ ಶಂಕರನಾರಾಯಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ದೇಶಭಕ್ತಿಯಿಂದ ಕೂಡಿದ ಭಾವಭರಿತ ವಾತಾವರಣದಲ್ಲಿ ಆಚರಿಸಲಾಯಿತು.

ಕುಂದಾಪುರ ವೃತ್ತ ನಿರೀಕ್ಷಕರಾದ ಶ್ರೀಯುತ ಜಯರಾಮ್. ಡಿ.ಗೌಡ ಮುಖ್ಯ ಅತಿಥಿಯಾಗಿ ಭಾಗಮಿಸಿ ಧ್ವಜಾರೋಹಣ ನೆರವೇರಿಸಿದರು.

ವಿದ್ಯಾರ್ಥಿಗಳಿಂದ ಶಿಸ್ತುಬದ್ಧವಾದ ಪಥಸಂಚಲನ ನಡೆಯಿತು. ಪಥಸಂಚಲನದ ಗೌರವರಕ್ಷೆಯನ್ನು  ಶ್ರೀಯುತ ಜಯರಾಮ್.ಡಿ.ಗೌಡ ಸ್ವೀಕರಿಸಿದರು. ನಂತರ ಅವರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ದೇಶಭಕ್ತಿಯ ಮೌಲ್ಯಗಳನ್ನು ಮೈಗೂಡಿಕೊಳ್ಳುವಂತೆ  ಪ್ರೇರಣೆಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಉಪನ್ಯಾಸಕರು, ಶಿಕ್ಷಕರು ಮತ್ತು ಶಿಕ್ಷಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ, ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿಕೊಂಡು  ಏಕಪಾತ್ರಾಭಿನಯವನ್ನು ಅತ್ಯಂತ ಮನೋಜ್ಞವಾಗಿ ಅಭಿನಯಿಸಿದರು.

ಕಿರಿಯ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿ ಪೂರ್ವ ವಿಭಾಗದವರೆಗೆ ವಿಭಾಗವಾರು ಒಂದೊಂದು ವಿದ್ಯಾರ್ಥಿಗಳನ್ನು ಒಳಗೊಂಡಂತೆ ತಂಡವನ್ನು ರಚಿಸಿ ಓದುವಿಕೆ, ಬರೆಯುವಿಕೆ, ಭಾಷಣ, ಚಿತ್ರರಚನೆ ಮುಂತಾದ ಸ್ಪರ್ಧೆಗಳನ್ನು ವಿಭಿನ್ನವಾಗಿ ರಿಲೇ ಮಾದರಿಯಲ್ಲಿ ಮಾಡಲಾಯಿತು. ಇದರಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಎಮರಾಲ್ಡ್, ರೂಬಿ,ಸಫಾಯರ್, ಟೋಪಾಜ್ ತಂಡ ಗಳು ಕ್ರಮವಾಗಿ ಪ್ರಥಮ,ದ್ವಿತೀಯ, ತೃತೀಯ, ಚತುರ್ಥ ಸ್ಥಾನವನ್ನು ಪಡೆದುಕೊಂಡರು. ತದನಂತರ ಶಂಕರನಾರಾಯಣ ಗ್ರಾಮ ಪಂಚಾಯಿತ್ ವತಿಯಿಂದ ನೀಡಲಾದ ಸಿಹಿತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಮಕ್ಕಳ ಉತ್ಸಾಹ, ಶಿಕ್ಷಕರ ಮಾರ್ಗದರ್ಶನ ಮತ್ತು ಆಡಳಿತ ಮಂಡಳಿಯ ನೆರವಿನಿಂದ 79ನೇ ಸ್ವಾತಂತ್ರ್ಯ ಮಹೋತ್ಸವ ಯಶಸ್ವಿಯಾಗಿ ನೆರವೇರಿತು.

 

 

 

Related Articles

Back to top button
error: Content is protected !!