ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ 79ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

"ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಧಿಸುವ ಛಲ ಹೊಂದುವ ಮುಖಾಂತರ ಉತ್ತಮ ಜೀವನವನ್ನು ಕಟ್ಟಿಕೊಳ್ಳಿ"---ನಿವೃತ್ತ ಸೇನಾಧಿಕಾರಿ ದೀಪಕ್ ಕುಮಾರ್ ಬಸ್ರೂರು 

Views: 0

ಕನ್ನಡ ಕರಾವಳಿ ಸುದ್ದಿ:ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ 79ನೇ ಸಂಭ್ರಮದ  ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣವನ್ನು ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ ನ ನಿವೃತ್ತ ಅಧಿಕಾರಿ ಶ್ರೀ ದೀಪಕ್ ಕುಮಾರ್ ಬಸ್ರೂರು ನೇರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಕೋರಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದಿನಗಳಲ್ಲಿ ಸಾಧಿಸುವ ಛಲ ಹೊಂದುವ ಮುಖಾಂತರ ಉತ್ತಮ ಜೀವನವನ್ನು ಕಟ್ಟಿಕೊಳ್ಳಿ ಎಂದರು ದೇಶಕ್ಕಾಗಿ ಅನೇಕ ಮಹನೀಯರು ಹೋರಾಡಿದ್ದಾರೆ ಮತ್ತು ತಮ್ಮ ಜೀವನವನ್ನು ತ್ಯಾಗ ಮಾಡಿದ್ದಾರೆ ಅವರೆಲ್ಲರ ಪರಿಶ್ರಮದಿಂದ ನಾವು ಸ್ವತಂತ್ರ ಭಾರತದಲ್ಲಿ ನೆಮ್ಮದಿಯಿಂದ ಜೀವಿಸುತ್ತಿದ್ದೇವೆ ಎನ್ನುವುದನ್ನು ಮರೆಯಬಾರದು ಎಂದು ಕರೆ ನೀಡಿದರು‌.

ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು‌ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಶ್ರೀ ಸೂರಜ್ ಕುಮಾರ್ ಶೆಟ್ಟಿ ಬಿ ಮತ್ತು ಎನ್ ಸಿ ಸಿ ಅಧಿಕಾರಿ ಕ್ಯಾಪ್ಟನ್ ಸಂದೀಪ್ ಕೆ ಉಪಸ್ಥಿತರಿದ್ದರು. 

ಶ್ರೀ ದೀಪಕ್ ಕುಮಾರ್ ಬಸ್ರೂರು ಇವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು ಹಾಗೂ ಕಾಲೇಜಿನ ಎನ್ಎಸ್ಎಸ್ ಎನ್ ಸಿ ಸಿ ರೋವರ್ ರೇಂಜರ್ ರೆಡ್ ಕ್ರಾಸ್ ಮತ್ತು ಲಲಿತ ಕಲಾ ಸಂಘದ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. 

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ಗುಡ್ಡಗಾಡು ಓಟದ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

 

Related Articles

Back to top button