ಶಿಕ್ಷಣ
ಬಸ್ರೂರು ಶ್ರೀ ಶಾರದಾ ಕಾಲೇಜು:ಮಾದಕ ವಸ್ತು ವಿರೋಧಿ ಮಾಹಿತಿ ಕಾರ್ಯಕ್ರಮ

Views: 0
ಕನ್ನಡ ಕರಾವಳಿ ಸುದ್ದಿ; ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಮಾದಕ ವಸ್ತು ವಿರೋಧಿ ಸಮಿತಿ ಆಶ್ರಯದಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಕಂಡ್ಲೂರು ಇವರ ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಮಾಹಿತಿ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಂಡ್ಲೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಭೀಮಾಶಂಕರ್ , ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಶ್ರೀ ಶಂಕರ್ ಮತ್ತು ಮಹಿಳಾ ಹೆಡ್ ಕಾನ್ಸ್ಟೇಬಲ್ ಶ್ರೀಮತಿ ಬೇಬಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ, ನೋಡಲ್ ಆಫೀಸರ್ ಡಾ ರವಿಚಂದ್ರ ಮತ್ತು ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.