ಇತರೆ
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ
"ದೇಶದ ಎಲ್ಲ ಪ್ರಜೆಗಳಲ್ಲೂ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಮೂಡಿಸಿ, ನೆರೆಹೊರೆಯವರೊಂದಿಗೆ ಶಾಂತಿ ಸೌಹಾರ್ದಯುತವಾಗಿ ಜೀವಿಸುವುದರೊಂದಿಗೆ ದೇಶದ ಅಭಿವೃದ್ಧಿ ಸಾಧ್ಯ"-------ಪ್ರೊ.ನವೀನ ಕುಮಾರ ಶೆಟ್ಟಿ, ಪ್ರಾಂಶುಪಾಲರು.

Views: 322
ಕನ್ನಡ ಕರಾವಳಿ ಸುದ್ದಿ:” ಈ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸರಕಾರ ಹೊರಡಿಸಿದ ‘ ನಯಾ ಭಾರತ್ ‘ ಪರಿಕಲ್ಪನೆ ದೇಶದ ಎಲ್ಲ ಪ್ರಜೆಗಳಲ್ಲೂ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಮೂಡಿಸಬೇಕು. ನೆರೆಹೊರೆಯವರೊಂದಿಗೆ ಸೌಹಾರ್ದಯುತವಾಗಿ ಇದ್ದಲ್ಲಿ ಶಾಂತಿಯುತವಾಗಿ ಜೀವಿಸಬಹುದು ಹಾಗೂ ದೇಶದ ಅಭಿವೃದ್ಧಿ ಕೂಡ ಸಾಧ್ಯ”ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ ಶೆಟ್ಟಿಯವರು ಕಾಲೇಜಿನಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣಗೈದು ಕರೆ ನೀಡಿದರು.ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಂದೀಪ್ ಪೂಜಾರಿಯವರು ಧ್ವಜಾರೋಹಣ ಪ್ರಕ್ರಿಯೆಯನ್ನು ನಿರ್ದೇಶಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಮ್ ಶೆಟ್ಟಿಯವರು ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಬೋಧಕ- ಬೋಧಕೇತರ ಸಿಬ್ಬಂಧಿಗಳು ಉಪಸ್ಥಿತರಿದ್ದರು.