ಬಸ್ರೂರು ಶ್ರೀ ಶಾರದಾ ಕಾಲೇಜು: ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ

Views: 17
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿನ ಗ್ರಂಥಾಲಯ ಮತ್ತು ಐ ಕ್ಯೂಎಸಿ ವಿಭಾಗದ ವತಿಯಿಂದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ರವಿಚಂದ್ರ ಎಚ್ ಎಸ್, ನಿವೃತ್ತ ಯೋಧರು ಮತ್ತು ಗ್ರಂಥಪಾಲಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಗ್ರಂಥಾಲಯದ ಮಹತ್ವ ಮತ್ತು ಓದಿಗಾಗಿ ವಿದ್ಯಾರ್ಥಿಗಳು ತಮ್ಮ ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ಮೀಸಲಿಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾರಾಯಣ ಪೈ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಕಾಲೇಜಿನ ಗ್ರಂಥಪಾಲಕರಾದ ಶ್ರೀ ಮುರಳಿಧರ ಹೆಗ್ಡೆ ಸ್ವಾಗತಿಸಿ, ಐಕ್ಯೂಎಸಿ ಅಧಿಕಾರಿಗಳಾದ ಸಂದೀಪ್ ಕೆ ಅತಿಥಿಗಳನ್ನು ಪರಿಚಯಿಸಿದರು .ತೃತೀಯ ಬಿಎ ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿದರು. ತೃತೀಯ ಬಿಎ ವಿದ್ಯಾರ್ಥಿನಿ ಸುಮನ ಪ್ರಾರ್ಥಿಸಿದರು. ತೃತೀಯ ಬಿಕಾಂ ವಿದ್ಯಾರ್ಥಿನಿ ಸೌಮ್ಯ ವಂದಿಸಿದರು.