ಇತರೆ

ಕುಂದಾಪುರ: ಬ್ಯಾಂಕ್ ಭದ್ರತಾ ಸಿಬ್ಬಂದಿ ಕುಸಿದು ಬಿದ್ದು ಸಾವು

Views: 264

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ನಗರದ ಬ್ಯಾಂಕ್ ಒಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸಮಾಡಿಕೊಂಡಿದ್ದ ಉಮೇಶ (47) ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬಿ.ಬಿ. ರಸ್ತೆಯಲ್ಲಿರುವ ತನ್ನ ಬಾಡಿಗೆ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಕೋಟ ತಲುಪುತ್ತಿದ್ದಂತೆ ದೇಹದಲ್ಲಿ ಚಲನೆ ಕಂಡುಬರಲಿಲ್ಲ ಮಾತನಾಡಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ ಮರಳಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದರು. ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದರು. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button