ಶಿಕ್ಷಣ
ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳ ಹೊಸ ಮೈಲಿಗಲ್ಲು

Views: 13
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ತಲ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸನ್ವಿತ್(8ನೇ ತರಗತಿ) ಮತ್ತು ತನೀಶ್(8ನೇ ತರಗತಿ) ವಿಜಯಶಾಲಿಗಳಾಗಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಬೋಧಕ/ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದರು.