ಶಿಕ್ಷಣ
ಬಸ್ರೂರು ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Views: 87
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ,ಉದ್ಯಾವರ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ 14/17 ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿರಾಜ್ 10ನೇ ತರಗತಿ ನೌಮನ್ 8ನೇ ತರಗತಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೆ ಸಾನಿಯಾ 9ನೇ ತರಗತಿ, ಮಧೀಹಾ ಹೀನಾ 7ನೇ ತರಗತಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ.
ಈ ಮೂಲಕ ಶಾಲೆಯ ಕೀರ್ತಿಯನ್ನು ಎತ್ತರಕ್ಕೆ ಕೊಂಡೊಯ್ದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು,ಭೋದಕ/ ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.