ಬಸ್ರೂರು ಶ್ರೀ ಶಾರದಾ ಕಾಲೇಜು: ಕುಂದಗನ್ನಡ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ- “ಚೆನ್ನಿ ಮಣಿ- 2025”

Views: 146
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಇಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯ ಅಂಗವಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕುಂದಗನ್ನಡ ಅಧ್ಯಯನ ಪೀಠ ಇದರ ಸಹಯೋಗದೊಂದಿಗೆ ಚೆನ್ನಿ ಮಣಿ- 2025 ಎನ್ನುವ ಕುಂದಗನ್ನಡ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ಕಾರ್ಯಕ್ರಮ ಕುಂದಾಪುರ ತಾಲೂಕಿನ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕೆ. ಜಯಪ್ರಕಾಶ್ ಹೆಗ್ಡೆ ಮಾಜಿ ಸಂಸದರು ಹಾಗೂ ಸದಸ್ಯರು ಕುಂದಗನ್ನಡ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇವರು ಉದ್ಘಾಟಿಸಿ ನಮ್ಮ ಕುಂದಾಪುರ ಕನ್ನಡ ಭಾಷೆಯು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು ಆ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮುಖಾಂತರ ಮಂಗಳೂರು ವಿಶ್ವವಿದ್ಯಾನಿಲಯದ ಕುಂದಗನ್ನಡ ಅಧ್ಯಯನ ಪೀಠದ ಸಹಯೋಗದೊಂದಿಗೆ ನಾವೆಲ್ಲರೂ ಆ ಭಾಷೆಯನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವನ್ನು ಮಾಡುವ ಎಂದು ಕರೆ ನೀಡಿದರು .
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲ ಸಚಿವರಾದ ಶ್ರೀ ರಾಜು ಮೊಗವೀರ, ಕೆಎಎಸ್ ಇವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಾಗಿ ಡಾ. ಗಿರೀಶ್ ಎಂ. ಶಿಕ್ಷಕರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾರ್ದಳ್ಳಿ ಮಂಡಳ್ಳಿ ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶಾರದಾ ಕಾಲೇಜು ಬಸ್ರೂರು ಇದರ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ವಿಶ್ವಸ್ತ ಮಂಡಳಿಯ ಅಧ್ಯಕ್ಷರಾದ ಶ್ರೀ ಕೆ ಜಯಕರ್ ಶೆಟ್ಟಿ ವಹಿಸಿದ್ದರು. ಕುಂದಗನ್ನಡ ಅಧ್ಯಯನಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸದಸ್ಯರಾದ ಶ್ರೀ ಕೆ ಸಿ ರಾಜೇಶ್ ಹಾಗೂ ಕುಂದಗನ್ನಡ ವಾಗ್ಮಿ ಶ್ರೀ ಚೇತನ್ ನೈಲಾಡಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಕುಮಾರಿ ಮಮತಾ, ಕನ್ನಡ ಉಪನ್ಯಾಸಕರು ವಂದಿಸಿದರು.
ಸ್ಪರ್ಧೆಯ ಪಲಿತಾಂಶ:
ಪದವಿಪೂರ್ವ ಕಾಲೇಜಿನ ವಿಭಾಗದಲ್ಲಿ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ದ್ವಿತೀಯ ಸ್ನಾನವನ್ನು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಪಡೆದುಕೊಂಡಿತು.
ಪದವಿ ಕಾಲೇಜು ವಿಭಾಗದಲ್ಲಿ ಕುಂದಾಪುರದ ಭಂಡಾರ್ಕರ್ಸ್ ಆರ್ಟ್ಸ್ ಅಂಡ್ ಸೈನ್ಸ್ ಕಾಲೇಜು ಪ್ರಥಮ ಸ್ಥಾನವನ್ನು ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ದ್ವಿತೀಯ ಸ್ಥಾನವನ್ನು ಗಳಿಸಿತು.