ಜನಮನ
ಅಗಸ್ಟ್ 27ರಿಂದ ರಾಜ್ಯಾದ್ಯಂತ ಮತ್ತೆ ಗುಡುಗು ಸಹಿತ ಭಾರೀ ಮಳೆ

Views: 294
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 22ರಿಂದ ಮಳೆಯ ತೀವ್ರತೆ ತಾತ್ಕಾಲಿಕವಾಗಿ ಕಡಿಮೆಯಾಗಲಿದೆ. ಆದರೆ, ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






