ಸಾಂಸ್ಕೃತಿಕ

ಕನ್ನಡದ ಸ್ಟಾರ್ ನಿರೂಪಕಿ ಅನುಶ್ರೀ ಮದುವೆ ಶುಭ ಮುಹೂರ್ತ ಫಿಕ್ಸ್

Views: 155

ಕನ್ನಡ ಕರಾವಳಿ ಸುದ್ದಿ: ಕನ್ನಡದ ಸ್ಟಾರ್  ನಿರೂಪಕಿಯಾಗಿ ಗುರುತಿಸಿಕೊಂಡ ಅನುಶ್ರೀ ಅವರ ಮದುವೆ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆಗೋಸ್ಟ್ 28 ರಂದು ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಅನುಶ್ರೀ ಅವರ ಮದುವೆ ಕಾರ್ಯಕ್ರಮ ನಡೆಯಲಿದೆ.ಅನುಶ್ರೀ ಮದುವೆ ಆಗುತ್ತಿರುವ ವಿಷಯ ಬಹಿರಂಗಗೊಂಡಿತ್ತು. ಇದೀಗ ಮದುವೆ ದಿನಾಂಕ ಫಿಕ್ಸ್ ಆಗಿದ್ದು ಆಗಸ್ಟ್ 28ರಂದು ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ. ಆಗಸ್ಟ್ 28ರಂದು ಬೆಂಗಳೂರು ಹೊರವಲಯದ ರೆಸಾರ್ಟ್ ನಲ್ಲಿ ಬೆಳಗ್ಗೆ 10:56 ರ ಶುಭ ಮೂಹೂರ್ತದಲ್ಲಿ ಮದುವೆ ಕಾರ್ಯಕ್ರಮ ನೆರವೇರಲಿದೆ. ಇತ್ತೀಚೆಗೆ ಅನುಶ್ರೀ ಹಾಗೂ ರೋಷನ್ ಒಟ್ಟಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಅನುಶ್ರೀ ಮದುವೆ ವಿಚಾರ ಮುನ್ನಲೆಗೆ ಬಂದಿತ್ತು.

ಮನೆಯವರೇ ನೋಡಿದ ಸಂಬಂಧ ಇದಾಗಿದ್ದು, ಕೊಡಗು ಮೂಲದ ರೋಷನ್ ಜೊತೆ ನಿರೂಪಕಿ ಅನುಶ್ರೀ ಹಸೆಮಣೆ ಏರಲಿದ್ದಾರೆ. ರೋಷನ್ ರಾಮಮೂರ್ತಿ ಅವರ ಪುತ್ರನಾಗಿದ್ದಾರೆ.

“ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ” ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆದುಕೊಂಡಿದ್ದಾರೆ

 

Related Articles

Back to top button