ರಾಜಕೀಯ

ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ 

Views: 38

ಕನ್ನಡ ಕರಾವಳಿ ಸುದ್ದಿ: ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಶುಕ್ರವಾರ ಚಳ್ಳಕೆರೆಯಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ವೀರೇಂದ್ರ ಸಹೋದರ ಕೆ.ಸಿ.ನಾಗರಾಜ್‌ ಅವರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಏಕಕಾಲದಲ್ಲಿ ಇಡಿ ಅಧಿಕಾರಿಗಳು ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿತು. ಶಾಸಕ ಕೆ.ಸಿ.ವೀರೇಂದ್ರ ಅವರ ಮನೆ, ಸಹೋದರರಾದ ಕೆ.ಸಿ.ನಾಗರಾಜ್‌, ಕೆ.ಸಿ.ತಿಪ್ಪೇಸ್ವಾಮಿ ಅವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ದಾಳಿ ನಡೆಯುತ್ತಿದ್ದಂತೆ ಅಪಾರ ಸಂಖ್ಯೆಯ ಜನರು ವೀರೇಂದ್ರ ಮನೆಯತ್ತ ಬರುತ್ತಿದ್ದಾರೆ. ಸಿಆರ್‌ಪಿಎಫ್‌ ಯೋಧರು ಮನೆ ಸುತ್ತಲೂ ಭದ್ರತೆ ಕೈಗೊಂಡಿದ್ದಾರೆ. ಶಾಸಕರ ಮನೆಗೆ ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಲಾಗಿದೆ

 

Related Articles

Back to top button