ಇತರೆ
ಕುಂದಾಪುರ: ಜಪ್ತಿಯಲ್ಲಿ ಕೀಟ ನಾಶಕ ಸೇವಿಸಿ ಆತ್ಮಹತ್ಯೆ

Views: 147
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಜಪ್ತಿ ಗ್ರಾಮದ ಗುಡ್ಡಿಮನೆಯ ಪ್ರಭಾಕರ (63) ಅವರು ಕೀಟ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗಸ್ಟ್ 22ರಂದು ಸಂಭವಿಸಿದೆ.
ವಿಪರೀತ ಕುಡಿತದ ಚಟ ಹೊಂದಿದ್ದ ಅವರು ಮೂರು ದಿನಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದಿದ್ದರು. ವಿಷ ಸೇವಿಸಿದ ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪುತ್ರಿ ವಿಶಾಲ ಶೆಟ್ಟಿ ಕುಂದಾಪುರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.