ಸಾಂಸ್ಕೃತಿಕ
ನಾಪತ್ತೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು: ನಟಿ ಗಲ್ರಾನಿ

Views: 130
ಕನ್ನಡ ಕರಾವಳಿ ಸುದ್ದಿ: ನಾಪತ್ತೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಧರ್ಮಸ್ಥಳ ಕೇಸ್ ಕುರಿತು ನಟಿ ಸಂಜನಾ ಗಲ್ರಾನಿ ಪ್ರತಿಕ್ರಿಯೆ ನೀಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಿದ್ದ ಮಾಸ್ಕ್ ಮ್ಯಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ವಿಚಾರಣೆ ಮಾಡುತ್ತಿದ್ದಾರೆ.
ಮೊದಲ ಬಾರಿಗೆ ನಟಿ ಸಂಜನಾ ಗಲ್ರಾನಿ ಧರ್ಮಸ್ಥಳ ಕೇಸ್ ಕುರಿತು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇವತ್ತಿನ ಬೆಳವಣಿಗೆ ನೋಡಿದರೆ ಮನಸ್ಸಿಗೆ ನೋವಾಗುತ್ತದೆ. ನಾಪತ್ತೆಯಾದ ಹೆಣ್ಣು ಮಕ್ಕಳ ಕುಟುಂಬಕ್ಕೆ ನ್ಯಾಯ ಸಿಗಬೇಕು. ರಾಜಕಾರಣ ಆಗುತ್ತಿದೆ ಎಂಬುದು ಮಾತ್ರ ನನಗೆ ಗೊತ್ತಿಲ್ಲ. ಅನ್ಯಾಯವಾದವರಿಗೆ ನ್ಯಾಯ ಸಿಗಬೇಕೆಂಬುದು ನನ್ನ ಆಗ್ರಹ ಎಂದು ಹೇಳಿದ್ದಾರೆ.