ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕೆ.ಪಿ.ಎಸ್. ನೆಂಪು ಇವರ ಪ್ರಾಯೋಜಕತ್ವದಲ್ಲಿ ಜರುಗಿದ ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರು ಇಲ್ಲಿನ ಬಾಲಕಿಯರು ವಿಜೇತರಾಗಿ ಸತತ ನಾಲ್ಕನೇ ಬಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರನ್ನು ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕರು ಹಾಗೂ ಎಸ್.ಡಿ.ಎಮ್.ಸಿ ಅಧ್ಯಕ್ಷರು,ಸದಸ್ಯರು ಅಭಿನಂದಿಸಿದ್ದಾರೆ.