ಇತರೆ
ಕಾರ್ಕಳದಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

Views: 305
ಕನ್ನಡ ಕರಾವಳಿ ಸುದ್ದಿ:ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ತಾಲೂಕಿನ ಕುಂಟಲ್ಪಾಡಿಯಲ್ಲಿ ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ.
ಮಂಗಳೂರು ಮೂಲದ ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್ ಜೆ ಆರ್ಕೇಡ್ ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಹತ್ಯೆಗೆ ನಿಖರ ಕಾರಣಗಳು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಎಸ್‌ಪಿ ಹರಿರಾಮ್ ಶಂಕರ್, ಎಎಸ್‌ಪಿ ಡಾ.ಹರ್ಷ ಪ್ರಿಯಾಂವದ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.