ಶಿಕ್ಷಣ

ಗುರುಕುಲ ಪದವಿ ಪೂರ್ವ ಕಾಲೇಜು: ರಂಗೋಲಿಯಲ್ಲಿ ಲೋಗೋ

Views: 309

ಕನ್ನಡ ಕರಾವಳಿ ಸುದ್ದಿ: ವಕ್ವಾಡಿಯ ಗುರುಕುಲ ಪದವಿಪೂರ್ವ ಕಾಲೇಜಿನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಮತ್ತು ರಂಗೋಲಿಯಲ್ಲಿ ಲೋಗೋ ಎಂಬ ವಿನೂತನ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಾಂಡ್ಯಾ ಎಜುಕೇಶನ್ ಟ್ರಸ್ಟ್ ನ ಜಂಟಿ ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಸುಭಾಶ್ಚಂದ್ರ ಶೆಟ್ಟಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ. ಕ್ರಿಯಾಶೀಲ ಮನೋಭಾವದಿಂದ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯತರಟಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಉತ್ತಮ ಸಾಧನೆಯನ್ನು ಮಾಡಬೇಕು ಎಂದು ಹರಸಿದರು.

ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ರೂಪ ಶಣೈಯವರು ವಿದ್ಯಾರ್ಥಿಗಳಿಗೆ ಶುಭಕೋರಿದರು. ತೀರ್ಪುಗಾರರಾಗಿ ಶ್ರೀಮತಿ ಸುಷ್ಮಾ ಶ್ರೀಮತಿ ಶೈಲಜಾ, ಶ್ರೀಮತಿ ಶುಭಲಕ್ಷ್ಮಿ, ಕು. ನಿರೀಕ್ಷಾ ಸಹಕರಿಸಿದರು,ಗಣಕಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ರವರು ಕಾರ್ಯಕ್ರಮ ನಿರ್ವಹಿಸಿದರು. ಅರ್ಥಶಾಸ್ತ್ರ ಉಪಾನ್ಯಾಸಕಿ ರಶ್ಮಿಕಾ ಸ್ವಾಗತಿಸಿದರು.ಲೆಕ್ಕಶಾಸ್ತ್ರ ಉಪನ್ಯಾಸಕ ಶ್ರೀ ಪ್ರಶಾಂತ್‌ ವಂದಿಸಿರು.

Related Articles

Back to top button