ಧರ್ಮಸ್ಥಳದ ಪ್ರಕರಣ: ಎಸ್ಐಟಿ ತನಿಖೆ ಮುಕ್ತಾಯಗೊಳಿಸಿ, ಸಿಐಡಿ ತನಿಖೆಗೆ?

Views: 177
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಹತ್ಯೆ ಮತ್ತು ನಾಪತ್ತೆ ಪ್ರಕರಣಗಳ ಮರು ತನಿಖೆ ನಡೆಸಲು ಈ ಕುರಿತು SIT ಕಾರ್ಯಾಚರಣೆಯನ್ನು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಸರ್ಕಾರ ಸೂಚಿಸಿದೆ ಎಂದು ಆ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಅವರ ಮಟ್ಟದಲ್ಲಿ ಈ ಕುರಿತು ಸಮಾಲೋಚನೆ ನಡೆದಿದೆ. ಮೂರು ದಿನಗಳ ಹಿಂದೆ SIT ಮುಖ್ಯಸ್ಥ ಪ್ರಣವ್ ಮೊಹಂತಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಮಾತುಕತೆ ನಡೆಸಿದ್ದು.
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ಮೃತದೇಹಗಳನ್ನು ಹೂತಿರುವ ಪ್ರಕರಣದ ತನಿಖಾ ಪ್ರಗತಿ ಮತ್ತು ಅಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಸಭೆಯ ನಂತರ, ತನಿಖೆಗೆ ತ್ವರಿತವಾಗಿ ಇತಿಶ್ರೀ ಹಾಡುವಂತೆ SIT ಗೆ ಮುಖ್ಯಮಂತ್ರಿ ಪರೋಕ್ಷವಾಗಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಸುತ್ತಮುತ್ತ ನೂರಾರು ಮೃತದೇಹಗಳನ್ನು ಅನಧಿಕೃತವಾಗಿ ಹೂತಿರುವುದಾಗಿ ಚಿನ್ನಯ್ಯ ಎಂಬ ವ್ಯಕ್ತಿ ಹೇಳಿಕೆ ನೀಡಿದ್ದ. ತನ್ನ ಆರೋಪಕ್ಕೆ ಪುಷ್ಟಿ ನೀಡಲು ಆತ ತಲೆಬುರುಡೆ ಮತ್ತು ಮೂಳೆಗಳನ್ನು ಸಾಕ್ಷಿಯಾಗಿ ತಂದಿದ್ದ. ಈ ಹೇಳಿಕೆ ಮತ್ತು ರಾಜ್ಯ ಮಹಿಳಾ ಆಯೋಗದ ಪತ್ರದ ಆಧಾರದ ಮೇಲೆ, ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳ ತನಿಖೆಗಾಗಿ SIT ರಚಿಸಲಾಗಿತ್ತು.
ಆದರೆ, ನ್ಯಾಯಾಲಯಕ್ಕೆ ಈಗಾಗಲೇ ಅಂತಿಮ ವರದಿ ಸಲ್ಲಿಸಿರುವ ವಿವಾದಾತ್ಮಕ ಹತ್ಯೆ ಪ್ರಕರಣಗಳ ತನಿಖೆ ಕುರಿತು ಸರ್ಕಾರದ ಆದೇಶದಲ್ಲಿ ಉಲ್ಲೇಖವಿರಲಿಲ್ಲ. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಹಳೆಯ ಪ್ರಕರಣಗಳ ಮರು ತನಿಖೆ ನಡೆಸಬೇಕಾದರೆ ಸರ್ಕಾರದ ಪೂರ್ವಾನುಮತಿ ಅಗತ್ಯ. ಹೀಗಾಗಿ, ಅನನ್ಯಾ ಭಟ್ ನಾಪತ್ತೆ ಪ್ರಕರಣವನ್ನು ಹೊರತುಪಡಿಸಿ, ಪದ್ಮಲತಾ, ಮಾವುತ ನಾರಾಯಣ. ಯಮುನಾ ಮುಂತಾದ ಇತರೆ ನಿಗೂಢ ಹತ್ಯೆ ಪ್ರಕರಣಗಳ ಮರು ತನಿಖೆಗೆ ಸರ್ಕಾರ ಸಮ್ಮತಿಸಿಲ್ಲ.