ಶಿಕ್ಷಣ

ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ‘ಫ್ಯಾಕಲ್ಟಿ ಡೆವಲಪ್‌ಮೆಂಟ್’ ಕಾರ್ಯಕ್ರಮ 

Views: 150

ಕನ್ನಡ ಕರಾವಳಿ ಸುದ್ದಿ:  ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಐಕ್ಯೂ ಎಸಿ ವಿಭಾಗದ ವತಿಯಿಂದ ಕಾಲೇಜಿನ ಪ್ರಾಧ್ಯಾಪಕರಿಗೆ ಒಂದು ದಿನದ ಫ್ಯಾಕಲ್ಟಿ ಡೆವಲಪ್‌ಮೆಂಟ್ ಪ್ರೋಗ್ರಾಮ್(ಎಫ್ ಡಿ ಪಿ)ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಜೈನ ವಿಶ್ವವಿದ್ಯಾನಿಲಯದ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಶ್ರೀಮತಿ ಚೈತ್ರಾ ಶೆಟ್ಟಿ ಭಾಗವಹಿಸಿ ಪ್ರಾಧ್ಯಾಪಕರ ಶೈಕ್ಷಣಿಕ, ಅರ್ಹತೆ ,ಬೋಧನೆ ಗುಣಮಟ್ಟ ಹಾಗೂ ಮೌಲ್ಯ ಆಧಾರಿತ ಕೋರ್ಸುಗಳ ಬಳಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಸುದೀರ್ಘವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯಾ, ಶ್ರೀಮತಿ ಅನುಪಮಾ ಎಸ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಐ ಕ್ಯೂ ಎಸಿ ಸಂಚಾಲಕರಾದ ಶ್ರೀ ಸಂದೀಪ್ ಕೆ ಸ್ವಾಗತಿಸಿ ಪರಿಚಯಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕುಮಾರ್ ಪಿ ಧನ್ಯವಾದ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಜರಿದ್ದರು.

Related Articles

Back to top button