ಇತರೆ
ಶಿರೂರು: ಗಣೇಶೋತ್ಸವಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಸಾವು

Views: 59
ಕನ್ನಡ ಕರಾವಳಿ ಸುದ್ದಿ: ಗಣೇಶೋತ್ಸವಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಪೊಲೀಸ್ ಚೆಕ್‌ಪೋಸ್ಟ್ ಬಳಿ ನಡೆದಿದೆ.
ಶಿರೂರು ಹಡವಿನಕೋಣೆ ನಿವಾಸಿ ಗೋಪಾಲ ಜಿ.ಮೇಸ್ತ (25) ಸ್ಥಳದಲ್ಲೆ ಮೃತ ಪಟ್ಟ ಯುವಕ. ಸಹ ಸವಾರ ಮನೋಜ್ ಮೇಸ್ತ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಕ್ರವಾರ ರಾತ್ರಿ 11 ಗಂಟೆ ಹೊತ್ತಿಗೆ ಗಣೇಶೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿ ಊಟಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿಯಾಗಿ ರಸ್ತೆಗೆ ಉರುಳಿ ಬಿದ್ದಿದ್ದಾರೆ ಈ ವೇಳೆ ಬಂದ ಲಾರಿ ಯುವಕನ ತಲೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.