ಸುಜ್ಞಾನ ಪಿಯು ಕಾಲೇಜಿನ ಮೊಜಮ್ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Views: 2
ಕನ್ನಡ ಕರಾವಳಿ ಸುದ್ದಿ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇವರು ಜಂಟಿಯಾಗಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಪಿ.ಯು. ಅಂತರ್ ಕಾಲೇಜು ಬಾಲಕ -ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮೊಜಮ್ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಮೊಜಮ್, ಕುಂದಾಪುರ ತಾಲೂಕಿನ ಬಸ್ರೂರು ನಿವಾಸಿಯಾದ ಅಬ್ದುಲ್ ಮುಬಿನ್ ಹಾಗೂ ತಸ್ಮಿಯಾ ದಂಪತಿಯ ಪುತ್ರ.
ವಿಜ್ಞಾನ ವಿಭಾಗದ ಅನೂಪ್ ಗಾಣಿಗ, ಹಾಗೂ ಶುಭಾ ಇಂಡಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀ. ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಶ್ರೀ. ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶ್ರೀ. ರಂಜನ್ ಬಿ. ಶೆಟ್ಟಿ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಜಯಲತಾ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.