ಶಿಕ್ಷಣ
ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲಿನ ಮೂವರು ವಿದ್ಯಾರ್ಥಿಗಳು ಆಯ್ಕೆ

Views: 9
ಕನ್ನಡ ಕರಾವಳಿ ಸುದ್ದಿ: ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ 14 ರ ವಯೋಮಾನದ ಕಲಾತ್ಮಕ ಏಕಲ್ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಸಾನಿಧ್ಯ ಎಸ್ ಮೊಗವೀರ (7ನೇ ತರಗತಿ) ಹಾಗು ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ವಂಶಿತ್(7ನೇ ತರಗತಿ) ಹಾಗೆಯೇ ತಾಳಾತ್ಮಕ ಯುಗಲ್ ಯೋಗಾಸನ ಸ್ಪರ್ಧೆಯಲ್ಲಿ ಸಾನಿಧ್ಯ ಎಸ್ ಮೊಗವೀರ(7ನೇ ತರಗತಿ) ಹಾಗೂ ಅಮೂಲ್ಯ (7ನೇ ತರಗತಿ) ಇವರ ಜೋಡಿ ಪ್ರಥಮ ಸ್ಥಾನ ಗಳಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ/ ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.