ಕರಾವಳಿ

ಧರ್ಮಸ್ಥಳ ಪ್ರಕರಣಕ್ಕೆ ED ತನಿಖೆ ಆರಂಭ ವಿದೇಶದಿಂದ ಫಂಡಿಂಗ್ ಆಗಿದೆಯಾ..?

Views: 52

ಕನ್ನಡ ಕರಾವಳಿ ಸುದ್ದಿ:ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿದೆರುವ ಆರೋಪ ಇದೆ. ಸದ್ಯ ಈ ಸಂಬಂಧ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಎಂಟ್ರಿಯಾಗಿದೆ.

ಧರ್ಮಸ್ಥಳ ಕುರಿತು ಸಾಕಷ್ಟು ಅಪಪ್ರಚಾರ ಮಾಡಲಾಗಿದೆ. ಶವಗಳನ್ನು ಹೂತಿಡಲಾಗಿದೆ ಎನ್ನುವ ಸುದ್ದಿಗಳು ಕೂಡ ಹರಿದಾಡಿದ್ದವು. ಎಸ್ಐಟಿ ಪರಿಶೀಲನೆ ಮಾಡಿದಾಗ ಒಂದೋ, ಎರಡೋ ಬುರುಡೆ, ಮೂಳೆಗಳು ಪತ್ತೆ ಆಗಿದ್ದವು. ಮಾಸ್ಕ್ ಮ್ಯಾನ್  ತೋರಿಸಿದ ಎಲ್ಲ ಕಡೆಯೂ ಮೂಳೆಗಳು ಏನು ಸಿಕ್ಕಿರಲಿಲ್ಲ. ಇದಾದ ಮೇಲೆ ತನಿಖೆ ಚುರುಕು ಪಡೆಯುತ್ತಿದ್ದಂತೆ ವಿದೇಶಗಳಿಂದ ಫಂಡಿಂಗ್ ಆಗಿರುವ ಆರೋಪಗಳು ಕೇಳಿ ಬಂದಿದ್ದವು.

ಈ ಸಂಬಂಧ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಇಡಿ ಕೇಸ್ ದಾಖಲಿಸಿಕೊಂಡಿದೆ. ತೇಜಸ್ ಎ ಗೌಡ ಹಾಗೂ ಇನ್ನೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಸಲ್ಲಿಕೆ ಆಗಿರುವ ಎರಡು ದೂರು ಆಧರಿಸಿ ಫೆಮಾ, ಫೆರಾ ಕಾಯ್ದೆಯಡಿ ಟಿಸಿ3 ದಾಖಲಿಸಿಕೊಳ್ಳಲಾಗಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣದವನ್ನ ಎಸ್ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ ಕೂಡ ಎಂಟ್ರಿಯಾಗಿದೆ.

ವಿದೇಶದ ಕುರುಡು ಕಾಂಚಾಣದ ಸದ್ದು ಕೇಳಿ ಬಂದಿದ್ದು ಹಣದ ವ್ಯವಹಾರದ ದಾಖಲೆಗಳ ಸಂಗ್ರಹಕ್ಕೆ ಮುಂದಾಗಿದೆ. ಷಡ್ಯಂತ್ರಕ್ಕೆ ಕೆಲ ಎನ್ಜಿಒಗಳಿಂದ ಫಂಡಿಂಗ್ ಆಗಿದೆಯಾ ಎಂದು ಒಡನಾಡಿ ಹಾಗೂ ಸಂವಾದ ಅಕೌಂಟ್ಗಳನ್ನು ಇಡಿ ಜಾಲಾಡುತ್ತಿದೆ. ಈ ಬಗ್ಗೆ ಮಾಹಿತಿ ಕೋರಿ ಎಸ್ಬಿಐ ಸೇರಿ ಇತರೆ ಬ್ಯಾಂಕ್ಗಳಿಗೆ ಪ್ಯಾನ್ ಹಾಗೂ ಅಕೌಂಟ್ಗಳ ಕುರಿತು ಪತ್ರ ಬರೆಯಲಾಗಿದೆ. ಕಳೆದ 5 ವರ್ಷಗಳ ಟ್ರಾನ್ಸ್ಕ್ಷನ್ ನೀಡುವಂತೆ ಮನವಿ ಮಾಡಲಾಗಿದೆ.

ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್ಗಳಿಗೆ ಪತ್ರದ ಮೂಲಕ ಮನವಿ ಮಾಡಲಾಗಿದೆ. ಈಗಾಗಲೇ ಹಲವು ಬ್ಯಾಂಕ್ಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. ಆದರೆ ಇನ್ನಷ್ಟು ಬ್ಯಾಂಕ್ಗಳ ಉತ್ತರಕ್ಕಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ. ಎಲ್ಲ ಮಾಹಿತಿ ಸಂಗ್ರಹವಾದ ಮೇಲೆ ಮುಂದಿನ ಕ್ರಮವನ್ನು ಇಡಿ ಅಧಿಕಾರಿಗಳು ಕೈಗೊಳ್ಳಲಿದ್ದಾರೆ.

Related Articles

Back to top button