ಇತರೆ

ಸಾಲಿಗ್ರಾಮ ದೇವಸ್ಥಾನದ ಪಕ್ಕದಲ್ಲಿಯೇ ಇಸ್ಪೀಟು ಜುಗಾರಿ ಆಟ:8 ಮಂದಿ ವಶಕ್ಕೆ

Views: 136

ಕನ್ನಡ ಕರಾವಳಿ ಸುದ್ದಿ: ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಯ ಹತ್ತಿರ ಇರುವ ಮನೆಯ ಬಳಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೋಟ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಸತೀಶ, ರಘು ಸಾಲಿಗ್ರಾಮ, ಚೇತನ ಕಾರ್ಕಡ, ಹರೀಶ, ಜನಾರ್ಧನ ಬಾರ್ಕೂರು, ಸನ್ನಿಧಾನ, ಪ್ರಸಾದ ಹಾಗೂ ನವೀನ ಎಂದು ಗುರುತಿಸಲಾಗಿದೆ.

ಬ್ರಹ್ಮಾವರ ತಾಲೂಕಿನ ಚಿತ್ರಪಾಡಿ ಗ್ರಾಮದ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೆರೆಯ ಹತ್ತಿರ ಇರುವ ಮನೆಯ ಬಳಿ ಇಸ್ಪೀಟು ಜುಗಾರಿ ಆಟ ಆಡುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಕೋಟ ಠಾಣಾ ಉಪನಿರೀಕ್ಷಕರಾದ ಪ್ರವೀಣ್ ಕುಮಾರ್ ಆರ್. ಅವರು ಸಿಬ್ಬಂದಿಗಳೊಂದಿಗೆ ಸೆ.2 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆಸಿ ಇಸ್ಪೀಟು ಆಡುತ್ತಿದ್ದ ಈ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

 

Related Articles

Back to top button