ಯುವಜನ

ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ನಿದ್ರೆ ಮಾತ್ರೆ ಸೇವಿಸಿ ಯುವತಿ ಆತ್ಮಹತ್ಯೆ

Views: 91

ಕನ್ನಡ ಕರಾವಳಿ ಸುದ್ದಿ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆಯಲ್ಲಿ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ಘಟನೆ ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ, ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ.

Related Articles

Back to top button
error: Content is protected !!