ಶೀಘ್ರವೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ?

Views: 275
ಕನ್ನಡ ಕರಾವಳಿ ಸುದ್ದಿ: 2025 ವರ್ಷಾಂತ್ಯದೊಳಗೆ ಚುನಾವಣೆ ಪೂರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ. ನವೆಂಬರ್ ವೇಳೆಗೆ ಚುನಾವಣೆಯ ನೋಟಿಫಿಕೇಶನ್ ಆಗುವ ಸಾಧ್ಯತೆ ಇದೆ. ಡಿಸೆಂಬರ್‌ನಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯಲಿವೆ. ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದರು.
ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿ
ಕ್ಷೇತ್ರ ಪುನರ್ವಿಂಗಡಣೆ ಕಾರ್ಯವು ಇನ್ನೂ ಕೆಲವು ಭಾಗಗಳಲ್ಲಿ ಬಾಕಿಯಿದೆ. ಮೀಸಲಾತಿ ಪಟ್ಟಿಯನ್ನು ತಯಾರಿಸುವ ಕಾರಣದಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ. ಈ ಸಂಬಂಧ ಸರ್ಕಾರದೊಂದಿಗೆ ಚುನಾವಣಾ ಆಯೋಗವು ಪತ್ರ ವ್ಯವಹಾರ ನಡೆಸಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರವು ಮೂರು ತಿಂಗಳ ಕಾಲಾವಧಿಯನ್ನು ಕೋರಿದೆ. ಕೆಲವು ಗ್ರಾಮ ಪಂಚಾಯಿತಿಗಳು ಪಟ್ಟಣ ಪಂಚಾಯಿತಿಗಳಾಗಿವೆ ಮತ್ತು ಕೆಲವು ಹಳ್ಳಿಗಳು ನಗರಸಭೆ/ಪುರಸಭೆ ವ್ಯಾಪ್ತಿಗೆ ಸೇರಿಕೊಂಡಿವೆ. ಇದರಿಂದಾಗಿ ಕ್ಷೇತ್ರ ಪುನರ್ವಿಂಗಡಣೆಯ ಅಗತ್ಯವಿದೆ. ರಾಜ್ಯದ 11-12 ಜಿಲ್ಲೆಗಳಲ್ಲಿ ಈ ಕಾರ್ಯ ನಡೆಯಬೇಕಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.