ಬಸ್ರೂರು ಶ್ರೀ ಶಾರದಾ ಕಾಲೇಜು: ಪದವಿ ವಿದ್ಯಾರ್ಥಿಗಳಿಗೆ ಪವರ್ ಆಫ್ ಡಿಜಿಟಲ್ ಮಾರ್ಕೆಟಿಂಗ್ ಉಪನ್ಯಾಸ ಕಾರ್ಯಕ್ರಮ

Views: 149
ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿನ ಪ್ರಥಮ ಮತ್ತು ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪವರ್ ಆಫ್ ಡಿಜಿಟಲ್ ಮಾರ್ಕೆಟಿಂಗ್ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಹರೀಶ್ ನೀರ್ ಮಾರ್ಗ, ಮ್ಯಾನೇಜಿಂಗ್ ಡೈರೆಕ್ಟರ್ ಯಾಕೋಲೆಡ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಮತ್ತು ದೀಪ ಡಿ ಹೆಗ್ಡೆ ಅಸಿಸ್ಟೆಂಟ್ ಮುಖ್ಯಸ್ಥರು ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಕೆನರಾ ವಿಕಾಸ್ ಕಾಲೇಜ್ ಮಂಗಳೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ಆಧುನಿಕ ಜಗತ್ತಿನಲ್ಲಿ ಡಿಜಿಟಲ್ ಮಾರ್ಕೆಟಿಂಗ್ ನ ಅವಶ್ಯಕತೆ ಸಾಮಾಜಿಕ ಮಾಧ್ಯಮ ಇಮೇಲ್ ಮಾರ್ಕೆಟಿಂಗ್ ಡಿಜಿಟಲ್ ಮಾರ್ಕೆಟಿಂಗ್ ಫ್ಲಾಟ್ ಫಾರ್ಮ್ಸ್ ಮೊದಲಾದ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಡಾ. ಚಂದ್ರಾವತಿ ಶೆಟ್ಟಿ, ಪ್ರಾಂಶುಪಾಲರು ಅಧ್ಯಕ್ಷತೆಯನ್ನು ವಹಿಸಿದ್ದರು ಡಿಜಿಟಲ್ ಮಾರ್ಕೆಟಿಂಗ್ ನ ಸಂಯೋಜಕರಾದ ಮುರಳಿಧರ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕರಾದ ಶ್ರೀಮತಿ ಶರಾವತಿ ಅತಿಥಿಗಳ ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಬೋಧಕರು ಬೋಧಕೇತರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.