ಇತರೆ
ದಿಡೀರ್ ಎಸ್ಐಟಿ ಕಚೇರಿಗೆ ಭೇಟಿ ನೀಡಿ ಅಪರಿಚಿತ ಸಾವುಗಳ ತನಿಖೆಗೆ ತಿಮರೋಡಿ ದೂರು

Views: 166
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಗ್ರಾಮಕ್ಕೆ ಸೇರಿದ 4 ವಸತಿ ಗೃಹಗಳಲ್ಲಿ 2006 ರಿಂದ 2010 ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಪರಿಚಿತ ಸಾವುಗಳ ಕುರಿತು ಗಂಭೀರ ಆರೋಪಗಳು ಕೇಳಿಬಂದಿದ್ದು.
ಇವು ಸಂಭಾವ್ಯ ಕೊಲೆ ಪ್ರಕರಣಗಳಾಗಿರುವುದರಿಂದ ವಿಶೇಷ ತನಿಖಾ ದಳ (SIT) ತಕ್ಷಣ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೌಜನ್ಯ ಪರ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ಬೆಳ್ತಂಗಡಿ ಎಸ್ ಐಟಿ ಕಛೇರಿಗೆ ದಿಢೀರ್ ಭೇಟಿ ನೀಡಿದ ಮಹೇಶ್ ಶೆಟ್ಟಿಯವರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ದಾಖಲೆಗಳನ್ನು ಆಧರಿಸಿ ಈ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.