ಶಿಕ್ಷಣ

ಬ್ರಹ್ಮಾವರ ಕಾಲೇಜಿಗೆ ಹೊರಟಿದ್ದ ಬಿಸಿಎ ವಿದ್ಯಾರ್ಥಿನಿ ನಾಪತ್ತೆ

Views: 187

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸಿಟ್ಯೂಷನ್ ನ ಬಿಸಿಎ ವಿದ್ಯಾರ್ಥಿನಿ ಸ್ಪೂರ್ತಿ ಎಸ್.ಹಿರೇಮಠ್ ಎಂಬಾಕೆ ಸೋಮವಾರ ಬೆಳಿಗ್ಗೆ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್ ನಲ್ಲಿ ವಾಸ್ತವ್ಯವಿರುವ ಸ್ಪೂರ್ತಿ ಎಸ್.ಹಿರೇಮಠ್ ಸೆಪ್ಟಂಬ‌ರ್ 15ರ ಬೆಳಿಗ್ಗೆ ಹಾಸ್ಟೆಲ್‌ ನಿಂದ ಕಾಲೇಜಿಗೆ ಹೊರಟಿದ್ದಳು. ಆದರೆ ಕಾಲೇಜಿಗೆ ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದೆ.

ಯಾರಿಗಾದರೂ ಮಾಹಿತಿ ಸಿಕ್ಕಿದಲ್ಲಿ ಕೂಡಲೇ ಬ್ರಹ್ಮಾವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

Related Articles

Back to top button
error: Content is protected !!